1 Samuel 27:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಆಕೀಷನಿಗೆ, “ನೀನು ನನ್ನನ್ನು ಮೆಚ್ಚಿಕೊಂಡಿದ್ದರೆ ಯಾವುದಾದರೊಂದು ಊರಲ್ಲ್ಲಿ ನನಗೆ ಸ್ಥಳವನ್ನು ಕೊಡು. ನಾನು ನಿನ್ನ ಸೇವಕನಷ್ಟೆ. ನಾನು ನಿನ್ನೊಡನೆ ಈ ರಾಜಧಾನಿಯಲ್ಲಿ ಇರುವುದಕ್ಕಿಂತ ಅಲ್ಲಿ ವಾಸಮಾಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ದಾವೀದನು ಆಕೀಷನಿಗೆ, “ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು” ಅಂದನು.
Kannada BSI Bible 2016
ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿನ ದಾವೀದನು ಆಕೀಷನಿಗೆ - ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿರುವದಾದರೆ ಯಾವದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸು, ನಾನು ಅಲ್ಲಿ ವಾಸಿಸುವೆನು ಅನ್ನಲು
Kannada Bible (KNCL) BSI 2016
ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು.