1 Samuel 27:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.
Kannada BSI Bible 2016
ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.
Kannada Bible (KNCL) BSI 2016
ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಪುರುಷರನ್ನಾದರೂ, ಸ್ತ್ರೀಯರನ್ನಾದರೂ ಉಳಿಸದೆ, ಆ ಸೀಮೆಯನ್ನು ಹೊಡೆದು, ಕುರಿಪಶುಗಳನ್ನೂ, ಕತ್ತೆಗಳನ್ನೂ, ಒಂಟೆಗಳನ್ನೂ, ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿಬಂದನು.