1 Samuel 28:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆಗೂಡಬೇಕೆಂಬುದನ್ನು ನೀನು ಅರ್ಥಮಾಡಿಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ” ಎನ್ನಲು ದಾವೀದನು,
Kannada BSI Bible 2016
ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ - ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂದು ನಿನಗೆ ಗೊತ್ತಿರುತ್ತದಲ್ಲವೋ ಎನ್ನಲು ದಾವೀದನು -
Kannada Bible (KNCL) BSI 2016
ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂಬುದು ನಿನಗೆ ಗೊತ್ತಿದೆಯಲ್ಲವೇ?’ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸಗಳಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯಗಳನ್ನು ಕೂಡಿಸಿಕೊಂಡರು. ಆಗ ಆಕೀಷನು ದಾವೀದನಿಗೆ, “ನೀನೂ, ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ?” ಎಂದನು.