1 Samuel 28:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.
Kannada BSI Bible 2016
ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿರಿಗಿ - ಅವನ ರೂಪ ಹೇಗಿದೆ ಎಂದು ಕೇಳಲು ಆಕೆಯು - ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕನು ಬರುತ್ತಾನೆ ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.
Kannada Bible (KNCL) BSI 2016
ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ಅವನ ರೂಪ ಹೇಗಿದೆ?” ಎಂದು ಅವಳನ್ನು ಕೇಳಿದನು. ಅವಳು, “ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನುಷ್ಯನು ಬರುತ್ತಿದ್ದಾನೆ,” ಎಂದಳು. ಅವನು ಸಮುಯೇಲನು ಎಂದು ಸೌಲನು ತಿಳಿದುಕೊಂಡು, ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.