1 Samuel 28:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.
Kannada BSI Bible 2016
ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.
Kannada Bible (KNCL) BSI 2016
ಅವರು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾರೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾರೆ. ಯೆಹೋವ ದೇವರು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು, ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟರು.