1 Samuel 28:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.
Kannada BSI Bible 2016
ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯೆಹೋವನ ಮಾತನ್ನು ಕೇಳಲಿಲ್ಲ; ಆತನು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದದರಿಂದಲೇ ಯೆಹೋವನು ಈಗ ನಿನಗೆ ಹೀಗೆ ಮಾಡುತ್ತಾನೆ.
Kannada Bible (KNCL) BSI 2016
ನೀನು ಸರ್ವೇಶ್ವರನ ಮಾತನ್ನು ಕೇಳಲಿಲ್ಲ; ಅವರು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದುದರಿಂದಲೇ ಸರ್ವೇಶ್ವರ ಈಗ ನಿನಗೆ ಹೀಗೆ ಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು.