1 Samuel 28:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.
Kannada BSI Bible 2016
ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿವಸ ಊಟ ಮಾಡಿರಲಿಲ್ಲವಾದದರಿಂದ ಅವನಲ್ಲಿ ಬಲವೇ ಇರಲಿಲ್ಲ.
Kannada Bible (KNCL) BSI 2016
ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ನೆಲದ ಮೇಲೆ ಬೋರಲು ಬಿದ್ದು, ಸಮುಯೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯಪಟ್ಟನು. ಆ ದಿನವೆಲ್ಲಾ ಏನೂ ಊಟಮಾಡದೆ ಇದ್ದುದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.