1 Samuel 28:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.
Kannada BSI Bible 2016
ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ - ನಿನ್ನ ದಾಸಿಯಾದ ನಾನು ನಿನ್ನ ಮಾತು ಕೇಳಿದೆನು; ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.
Kannada Bible (KNCL) BSI 2016
ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.