1 Samuel 28:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.
Kannada BSI Bible 2016
ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಒಲ್ಲೆನು; ಊಟಮಾಡುವದಿಲ್ಲ ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕೂತುಕೊಂಡನು.
Kannada Bible (KNCL) BSI 2016
ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.