1 Samuel 28:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.
Kannada BSI Bible 2016
ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟುಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು ಪಕ್ವಮಾಡಿ ಹಿಟ್ಟನ್ನು ತೆಗೆದುಕೊಂಡು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.
Kannada Bible (KNCL) BSI 2016
ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆ ಶೀಘ್ರವಾಗಿ ಅದನ್ನು ಕೊಯ್ದು, ಪಕ್ವಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,