1 Samuel 28:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.
Kannada BSI Bible 2016
ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇವಿುನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಎಲ್ಲಾ ಇಸ್ರಾಯೇಲ್ಯರೊಡನೆ ಬಂದು ಗಿಲ್ಬೋವದಲ್ಲಿ ಇಳುಕೊಂಡನು.
Kannada Bible (KNCL) BSI 2016
ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು.