1 Samuel 28:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
Kannada BSI Bible 2016
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.
Kannada Bible (KNCL) BSI 2016
ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.