1 Samuel 28:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.
Kannada BSI Bible 2016
ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅವನು ತನ್ನ ಸೇವಕರಿಗೆ - ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು ಎಂದು ಹೇಳಲಾಗಿ ಅವರು - ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ ಅಂದರು.
Kannada Bible (KNCL) BSI 2016
ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.