1 Samuel 29:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಮತ್ತು ನಿನ್ನ ಜನರು ಮುಂಜಾನೆಯಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳುತ್ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.
Kannada BSI Bible 2016
ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿರಿ ಎಂದು ಹೇಳಿದನು.
Kannada Bible (KNCL) BSI 2016
ಆದ್ದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.