1 Samuel 29:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರ ಅಧಿಪತಿಗಳು ನೂರು ಜನರ ಗುಂಪುಗಳಾಗಿಯೂ ಒಂದು ಸಾವಿರ ಜನರ ಗುಂಪುಗಳಾಗಿಯೂ ಬರುತ್ತಿದ್ದರು. ದಾವೀದನು ಮತ್ತು ಅವನ ಜನರು ಆಕೀಷನ ಹಿಂದೆ ಬರುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
Kannada BSI Bible 2016
ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂದಳದಲ್ಲಿದ್ದನು.
Kannada Bible (KNCL) BSI 2016
ಫಿಲಿಷ್ಟಿಯ ರಾಜರುಗಳ ಸೈನಿಕರು ನೂರು ನೂರು ಮಂದಿಯಾಗಿ ಹಾಗು ಸಾವಿರ ಸಾವಿರ ಮಂದಿಯಾಗಿ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಭಾಗದಲ್ಲಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರ ಅಧಿಪತಿಗಳು ನೂರು ನೂರಾಗಿಯೂ, ಸಾವಿರ ಸಾವಿರವಾಗಿಯೂ ನಡೆದು ಬಂದರು. ದಾವೀದನೂ, ಅವನ ಜನರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.