1 Samuel 29:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ಫಿಲಿಷ್ಟಿಯ ರಾಜರು, “ಈ ಹಿಬ್ರಿಯರು ಏಕೆ?” ಎಂದು ಆಕೀಷನನ್ನು ಕೇಳಿದರು. “ಈತ, ಇಸ್ರಯೇಲರ ಅರಸನಾದ ಸೌಲನ ಸೇವಕನಾದ ದಾವೀದನಲ್ಲವೇ? ಇವನು ಇಷ್ಟು ವರ್ಷ, ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲೇ ಇದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ,” ಎಂದು ಆಕೀಷನು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.