1 Samuel 29:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?
Kannada BSI Bible 2016
ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಫಿಲಿಷ್ಟಿಯಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ - ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇವಿುಸಿದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡಿಯುವದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ!
Kannada Bible (KNCL) BSI 2016
ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು,:ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?