1 Samuel 29:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.
Kannada BSI Bible 2016
ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ ಅವನ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು ಅಂದನು.
Kannada Bible (KNCL) BSI 2016
ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು.