1 Samuel 29:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೀಷನು, “ನೀನು ಒಳ್ಳೆಯವನೆಂದು ನಾನು ನಂಬುತ್ತೇನೆ. ನೀನು ದೇವದೂತನಂತಿರುವೆ. ಆದರೆ ಫಿಲಿಷ್ಟಿಯ ಸೇನಾಧಿಪತಿಗಳು, ‘ದಾವೀದನು ನಮ್ಮ ಜೊತೆ ಯುದ್ಧಕ್ಕೆ ಬರುವಂತಿಲ್ಲ’ ಎಂದು ಈಗಲೂ ಹೇಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.
Kannada BSI Bible 2016
ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆಕೀಷನು ದಾವೀದನಿಗೆ - ನೀನು ಒಳ್ಳೆಯವನೆಂದು ನನಗೆ ಗೊತ್ತದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ; ಆದರೆ ಫಿಲಿಷ್ಟಿಯಪ್ರಭುಗಳು - ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದೆಂದು ಹೇಳುತ್ತಾರಲ್ಲಾ;
Kannada Bible (KNCL) BSI 2016
ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತಿದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುವೆ; ಆದರೆ ಫಿಲಿಷ್ಟಿಯದ ರಾಜರುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೀಷನು ದಾವೀದನಿಗೆ ಉತ್ತರವಾಗಿ, “ನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ, ‘ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದು,’ ಎಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.