1 Samuel 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
Kannada BSI Bible 2016
ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನಷ್ಟೆ. ಆ ಕಾಲದಲ್ಲಿ ದೇವೋಕ್ತಿಗಳು ವಿರಳವಾಗಿದ್ದವು, ದೇವದರ್ಶನಗಳು ಅಪರೂಪವಾಗಿದ್ದವು.
Kannada Bible (KNCL) BSI 2016
ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.