1 Samuel 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅಲ್ಲಿ ಪ್ರತ್ಯಕ್ಷನಾಗಿ ನಿಂತು ಮೊದಲು ಕರೆದಂತೆಯೇ “ಸಮುವೇಲನೆ, ಸಮುವೇಲನೆ” ಎಂದು ಕರೆದನು. ಸಮುವೇಲನು, “ಅಪ್ಪಣೆಯಾಗಲಿ, ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.
Kannada BSI Bible 2016
ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆ ಸಮುವೇಲನೇ, ಸಮುವೇಲನೇ ಅಂದನು. ಸಮುವೇಲನು - ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದನು.
Kannada Bible (KNCL) BSI 2016
ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಬಂದು ನಿಂತು ಮೊದಲಿನ ಹಾಗೆಯೇ, “ಸಮುಯೇಲನೇ, ಸಮುಯೇಲನೇ,” ಎಂದು ಕರೆದರು. ಅದಕ್ಕೆ ಸಮುಯೇಲನು, “ಯೆಹೋವ ದೇವರೇ ಮಾತನಾಡಿ; ನಿಮ್ಮ ದಾಸನು ಕೇಳುತ್ತಾನೆ,” ಎಂದನು.