1 Samuel 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
Kannada BSI Bible 2016
ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
Kannada Bible (KNCL) BSI 2016
ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.