1 Samuel 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.
Kannada BSI Bible 2016
ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸಮುವೇಲನು ಮಲಗಿ ಹೊತ್ತಾರೆಯಲ್ಲೆದ್ದು ಯೆಹೋವಮಂದಿರದ ಕದಗಳನ್ನು ತೆರೆದನು; ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವದಕ್ಕೆ ಭಯಪಟ್ಟನು.
Kannada Bible (KNCL) BSI 2016
ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಉದಯದವರೆಗೂ ಮಲಗಿದ್ದು, ಯೆಹೋವ ದೇವರ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುಯೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯಪಟ್ಟನು.