1 Samuel 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
Kannada BSI Bible 2016
ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
Kannada Bible (KNCL) BSI 2016
ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ.