1 Samuel 3:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು. ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.
Kannada BSI Bible 2016
ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತಿರಿಗಿ - ಸಮುವೇಲನೇ ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ - ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅನ್ನಲು ಅವನು - ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ ಎಂದನು.
Kannada Bible (KNCL) BSI 2016
ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು, “ಸಮುಯೇಲನೇ,” ಎಂದು ಅವನನ್ನು ತಿರುಗಿ ಕರೆದರು. ಆಗ ಸಮುಯೇಲನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ; ನನ್ನನ್ನು ಕರೆದೆಯಲ್ಲಾ,” ಎಂದನು. ಅದಕ್ಕವನು, “ನನ್ನ ಮಗನೇ, ನಾನು ಕರೆಯಲಿಲ್ಲ; ನೀನು ಹೋಗಿ ಮಲಗಿಕೋ,” ಎಂದನು.