1 Samuel 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.
Kannada BSI Bible 2016
ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋತ್ತರಗಳನ್ನು ಹೊಂದಿರಲಿಲ್ಲ.
Kannada Bible (KNCL) BSI 2016
ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಆವರೆಗೂ ಯೆಹೋವ ದೇವರನ್ನು ತಿಳಿದುಕೊಂಡಿರಲಿಲ್ಲ. ಯೆಹೋವ ದೇವರ ವಾಕ್ಯವು ಅವನಿಗೆ ಪ್ರಕಟವಾಗಿರಲೂ ಇಲ್ಲ.