1 Samuel 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಸಮುವೇಲನನ್ನು ಮೂರನೆಯ ಸಲ ಕರೆದನು. ಸಮುವೇಲನು ಮತ್ತೆ ಮೇಲೆದ್ದು ಏಲಿಯನ ಬಳಿಗೆ ಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಅಂದನು. ಬಾಲಕನನ್ನು ಕರೆಯುತ್ತಿರುವವನು ಯೆಹೋವನೆಂಬುದು ಏಲಿಗೆ ಆಗ ಅರ್ಥವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;
Kannada BSI Bible 2016
ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ - ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ ಅನ್ನಲು ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ - ಹೋಗಿ ಮಲಗಿಕೋ;
Kannada Bible (KNCL) BSI 2016
ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮತ್ತೆ ಮೂರನೆಯ ಸಾರಿ, “ಸಮುಯೇಲನೇ,” ಎಂದು ಕರೆದರು. ಅವನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ,” ಎಂದನು. ಆಗ ಏಲಿಯು, ಯೆಹೋವ ದೇವರು ಹುಡುಗನನ್ನು ಕರೆದರೆಂದು ಗ್ರಹಿಸಿಕೊಂಡನು.