1 Samuel 30:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಈಜಿಪ್ಟಿನವನಿಗೆ ಅಂಜೂರದ ಹಣ್ಣಿನ ಉಂಡೆಯನ್ನೂ ಎರಡು ಗೊಂಚಲು ಒಣ ದ್ರಾಕ್ಷಿಯನ್ನೂ ಕೊಟ್ಟರು. ಅವನು ತಿಂದನಂತರ ಚೇತರಿಸಿಕೊಂಡನು. ಅವನು ಮೂರು ದಿವಸ ಹಗಲಿರುಳು ಆಹಾರವನ್ನೇನೂ ತಿಂದಿರಲಿಲ್ಲ; ನೀರನ್ನೂ ಕುಡಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.
Kannada BSI Bible 2016
ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷೇಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.
Kannada Bible (KNCL) BSI 2016
ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.