1 Samuel 30:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆರೇತ್ಯರು ವಾಸಿಸುವ ನೆಗೆವ್ ಮೇಲೆ ನಾವು ಆಕ್ರಮಣ ಮಾಡಿದೆವು. ನಾವು ಯೆಹೂದ ದೇಶದ ಮೇಲೆ ಮತ್ತು ಕಾಲೇಬ್ಯರು ವಾಸಿಸುವ ನೆಗೆವ್ ಪ್ರಾಂತ್ಯಗಳ ಮೇಲೆ ಆಕ್ರಮಣ ಮಾಡಿದೆವು. ನಾವು ಚಿಕ್ಲಗನ್ನು ಸುಟ್ಟುಹಾಕಿದೆವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.
Kannada BSI Bible 2016
ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.