1 Samuel 30:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
Kannada BSI Bible 2016
ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಾಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
Kannada Bible (KNCL) BSI 2016
ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.