1 Samuel 30:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಇನ್ನೂರು ಮಂದಿ ಉಳಿದುಕೊಂಡಿದ್ದ ಬೆಸೋರ್ ಹಳ್ಳಕ್ಕೆ ಬಂದನು. ತಮ್ಮ ಅತಿಯಾದ ಆಯಾಸದಿಂದಲೂ ಬಲಹೀನತೆಯಿಂದಲೂ ದಾವೀದನನ್ನು ಹಿಂಬಾಲಿಸಲಾಗದ ಜನರೇ ಇವರು. ದಾವೀದನನ್ನು ಮತ್ತು ಅವನೊಡನೆ ಹೋಗಿದ್ದ ಸೈನಿಕರನ್ನು ಸಂಧಿಸಲು ಇವರು ಹೊರಗೆ ಬಂದರು. ದಾವೀದ ಮತ್ತು ಅವನ ಸೈನ್ಯವು ಸಮೀಪಿಸಿದಾಗ, ಬೆಸೋರ್ ಹಳ್ಳದಲ್ಲಿದ್ದ ಜನರು ಅವರನ್ನು ವಂದಿಸಿದರು. ದಾವೀದನು ಸಹ ಅವರನ್ನು ಸಂಧಿಸಿ ಅವರ ಯೋಗಕ್ಷೇಮವನ್ನು ವಿಚಾರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.
Kannada BSI Bible 2016
ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಇಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಬಂದರು. ದಾವೀದನು ಅವರನ್ನು ಸಂಧಿಸಿ ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದನು.
Kannada Bible (KNCL) BSI 2016
ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.