1 Samuel 30:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಹೇಳುವುದನ್ನು ಯಾರೂ ಕೇಳುವುದಿಲ್ಲ! ಯುದ್ಧಮಾಡುವವನಿಗೆ ಸಿಗುವ ಪಾಲು ಮತ್ತು ಯುದ್ಧ ಸಾಮಾಗ್ರಿಗಳನ್ನು ಕಾಯುವವನಿಗೆ ಸಿಗುವ ಪಾಲು ಒಂದೇ ಸಮನಾಗಿರಬೇಕು. ಪ್ರತಿಯೊಬ್ಬರ ಪಾಲೂ ಒಂದೇ ಸಮವಾಗಿರಬೇಕು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯ್ದವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.