1 Samuel 30:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಚಿಕ್ಲಗಿಗೆ ಆಗಮಿಸಿದನು. ನಂತರ ಅವನು ಅಮಾಲೇಕ್ಯರಿಂದ ವಶಪಡಿಸಿಕೊಂಡಿದ್ದ ಕೆಲವು ವಸ್ತುಗಳನ್ನು ಯೆಹೂದದ ಅವನ ಗೆಳೆಯರಿಗೂ ನಾಯಕರಿಗೂ ಕಳುಹಿಸಿದನು. ದಾವೀದನು, “ಯೆಹೋವನ ಶತ್ರುಗಳಿಂದ ನಾವು ವಶಪಡಿಸಿಕೊಂಡ ವಸ್ತುಗಳ ಕೊಡುಗೆಯು ನಿಮಗಾಗಿ ಇಲ್ಲಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.
Kannada BSI Bible 2016
ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ - ಇಗೋ, ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ ಎಂದು ಹೇಳಿಸಿದನು.
Kannada Bible (KNCL) BSI 2016
ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.