1 Samuel 30:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಮತ್ತು ಅವನ ಜನರು ಚಿಕ್ಲಗಿಗೆ ಬಂದರು. ನಗರವು ಸುಡುತ್ತಿರುವುದನ್ನು ಅವರು ನೋಡಿದರು. ಅವರ ಹೆಂಡತಿಯರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅಲ್ಲಿರಲಿಲ್ಲ. ಅಮಾಲೇಕ್ಯರು ಅವರನ್ನು ಎಳೆದುಕೊಂಡು ಹೋಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು
Kannada BSI Bible 2016
ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವದನ್ನೂ ತಮ್ಮ ಹೆಂಡತಿಯರೂ ಗಂಡುಹೆಣ್ಣು ಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವದನ್ನೂ ಕಂಡು
Kannada Bible (KNCL) BSI 2016
ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಟ್ಟುಹೋಗಿರುವುದನ್ನೂ ತಮ್ಮ ಹೆಂಡತಿಯರೂ ಗಂಡು-ಹೆಣ್ಣು ಮಕ್ಕಳೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.