1 Samuel 31:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.
Kannada BSI Bible 2016
ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿದ್ದ ಶೂರರೆಲ್ಲರೂ ಹೊರಟು ರಾತ್ರಿಯೆಲ್ಲಾ ನಡೆದುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.
Kannada Bible (KNCL) BSI 2016
ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು.