1 Samuel 31:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.
Kannada BSI Bible 2016
ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲ್ಯರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.
Kannada Bible (KNCL) BSI 2016
ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.