1 Samuel 31:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ಈ ವಿಜಯದ ವಾರ್ತೆಯನ್ನು ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
Kannada BSI Bible 2016
ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡು ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
Kannada Bible (KNCL) BSI 2016
ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.