1 Samuel 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
Kannada BSI Bible 2016
ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು. ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳುಕೊಂಡರು.
Kannada Bible (KNCL) BSI 2016
ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.