1 Samuel 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಶೀಲೋವನ್ನು ತಲುಪಿದಾಗ ಏಲಿಯು ಪೀಠದ ಮೇಲೆ ಕುಳಿತಿದ್ದನು. ದೇವರ ಪವಿತ್ರ ಪೆಟ್ಟಿಗೆಗೆ ಏನಾಯಿತೋ ಎಂದು ಚಿಂತಿಸುತ್ತಾ ಏಲಿಯು ನಗರದ್ವಾರದಲ್ಲಿ ಕುರ್ಚಿಯ ಮೇಲೆ ಕಾಯುತ್ತಾ ಕುಳಿತಿದ್ದನು. ಆಗ ಬೆನ್ಯಾಮೀನ್ಯನು ಶೀಲೋವನ್ನು ಪ್ರವೇಶಿಸಿ ಅಲ್ಲಿನ ಕೆಟ್ಟ ಸುದ್ದಿಯನ್ನು ಹೇಳಿದನು. ನಗರದ ಜನರೆಲ್ಲರು ಜೋರಾಗಿ ಗೋಳಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ
Kannada BSI Bible 2016
ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೀಲೋವಿಗೆ ಬಂದು ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖ ಧ್ವನಿಯನ್ನು ಕೇಳಿ
Kannada Bible (KNCL) BSI 2016
ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.