1 Samuel 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
Kannada BSI Bible 2016
ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು ಏಲಿಗೆ - ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು ಅನ್ನಲು ಏಲಿಯು ಅವನನ್ನು - ನನ್ನ ಮಗನೇ, ವರ್ತಮಾನವೇನು ಎಂದು ಕೇಳಿದನು.
Kannada Bible (KNCL) BSI 2016
ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು.