1 Samuel 4:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಲಿಯ ಸೊಸೆ ಅಂದರೆ ಫೀನೆಹಾಸನ ಹೆಂಡತಿಯು ಗರ್ಭಿಣಿಯಾಗಿದ್ದಳು. ಹೆರಿಗೆಯ ಸಮಯ ಸಮೀಪಿಸಿತ್ತು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುಗಳ ವಶವಾದದ್ದನ್ನೂ ತನ್ನ ಮಾವನಾದ ಏಲಿಯು ಸತ್ತದ್ದನ್ನೂ ಗಂಡನಾದ ಫೀನೆಹಾಸನು ಸತ್ತ ಸುದ್ದಿಯನ್ನೂ ಅವಳು ಕೇಳಿದಳು. ಈ ಸುದ್ದಿಯನ್ನು ಕೇಳಿದ ತಕ್ಷಣ ಪ್ರಸವವೇದನೆಯಾಗಿ ಮಗುವನ್ನು ಹೆತ್ತಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
Kannada BSI Bible 2016
ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ದಿನತುಂಬಿದ ಗರ್ಭಿಣಿಯಾಗಿದ್ದು ದೇವರ ಮಂಜೂಷವು ಶತ್ರುವಶವಾದದ್ದನ್ನೂ ಮಾವನೂ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
Kannada Bible (KNCL) BSI 2016
ಫೀನೆಹಾಸನ ಹೆಂಡತಿಯಾದ ಏಲಿಯ ಸೊಸೆ ದಿನತುಂಬಿದ ಗರ್ಭಿಣಿ. ದೇವರ ಮಂಜೂಷ ಶತ್ರುವಶವಾದದ್ದನ್ನು ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ಗರ್ಭಿಣಿಯಾಗಿ ಹೆರುವ ಕಾಲದಲ್ಲಿದ್ದಳು. ಅವಳು, ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರೆಂಬುದನ್ನೂ ಕೇಳಿದಾಗ, ಅವಳಿಗೆ ಪ್ರಸವವೇದನೆ ಉಂಟಾಗಿ, ಅವಳು ಗಂಡು ಮಗುವನ್ನು ಹೆತ್ತಳು.