1 Samuel 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು. ಆದರೆ ಏಲಿಯ ಸೊಸೆಯು ಅವರ ಮಾತಿಗೆ ಉತ್ತರಿಸಲೂ ಇಲ್ಲ, ಲಕ್ಷ್ಯ ಕೊಡಲೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
Kannada BSI Bible 2016
ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು - ಭಯಪಡಬೇಡ, ಮಗನನ್ನು ಹೆತ್ತಿದ್ದೀ ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರ ಕೊಡಲಿಲ್ಲ.
Kannada Bible (KNCL) BSI 2016
ಆಕೆ ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಮಹಿಳೆಯರು, “ಭಯಪಡಬೇಡ, ಮಗನನ್ನು ಹೆತ್ತಿದ್ದೀ,” ಎಂದು ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರವನ್ನೂ ಕೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ.