1 Samuel 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.
Kannada BSI Bible 2016
ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಇದನ್ನು ಕೇಳಿ - ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣವೆಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ಗೊತ್ತಾಯಿತು.
Kannada Bible (KNCL) BSI 2016
ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು.