1 Samuel 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.
Kannada BSI Bible 2016
ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು - ಅಯ್ಯೋ, ಮುಂಚೆ ಹೀಗಿದ್ದಿಲ್ಲ.
Kannada Bible (KNCL) BSI 2016
“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.