1 Samuel 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.
Kannada BSI Bible 2016
ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು - ನೋಡಿರಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವದಕ್ಕೋಸ್ಕರ ಇಸ್ರಾಯೇಲ್‍ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆಂದು ಕೂಗಿಕೊಂಡರು.
Kannada Bible (KNCL) BSI 2016
ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.