1 Samuel 5:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.
Kannada BSI Bible 2016
ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.
Kannada Bible (KNCL) BSI 2016
ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.