1 Samuel 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಷ್ಡೋದಿನ ಜನರು ಮಾರನೆಯ ದಿನ ಬೆಳಿಗ್ಗೆ ಎದ್ದಾಗ, ದಾಗೋನನ ವಿಗ್ರಹವು ಯೆಹೋವನ ಪೆಟ್ಟಿಗೆಯ ಮುಂದೆ ಬೋರಲಾಗಿ ಬಿದ್ದಿತ್ತು. ಅಷ್ಡೋದಿನ ಜನರು ದಾಗೋನ್ ವಿಗ್ರಹವನ್ನು ಅದರ ಸ್ಥಳದಲ್ಲಿ ಮತ್ತೆ ನಿಲ್ಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.
Kannada BSI Bible 2016
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವದನ್ನು ಕಂಡು ಅದನ್ನು ಎತ್ತಿ ತಿರಿಗಿ ಅದರ ಸ್ಥಳದಲ್ಲಿಟ್ಟರು.
Kannada Bible (KNCL) BSI 2016
ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡುವಾಗ ದಾಗೋನ್ ವಿಗ್ರಹ ಸರ್ವೇಶ್ವರನ ಮಂಜೂಷದ ಮುಂದೆ ಬೋರಲುಬಿದ್ದಿರುವುದನ್ನು ಕಂಡು ಅದನ್ನು ಪುನಃ ಅದರ ಸ್ಥಳದಲ್ಲಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.