1 Samuel 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.
Kannada BSI Bible 2016
ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.
Kannada Bible (KNCL) BSI 2016
ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.