1 Samuel 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನೆಲ್ಲಾ ಕಂಡ ಅಷ್ಡೋದಿನ ಜನರು, “ಇಸ್ರೇಲರ ದೇವರ ಈ ಪವಿತ್ರ ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ
Kannada BSI Bible 2016
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಡೋದಿನ ಜನರು ಅದನ್ನು ನೋಡಿ - ಇಸ್ರಾಯೇಲ್‍ದೇವರ ಮಂಜೂಷವು ನಮ್ಮಲ್ಲಿರಬಾರದು; ಆತನ ಹಸ್ತವು ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ ಎಂದು ಹೇಳಿ
Kannada Bible (KNCL) BSI 2016
ಇದನ್ನು ನೋಡಿ ಆ ಅಷ್ಡೋದಿನ ಜನರು, “ಇಸ್ರಯೇಲ್ ದೇವರ ಮಂಜೂಷ ನಮ್ಮಲ್ಲಿರಬಾರದು; ಆತನ ಹಸ್ತ ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ,” ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.