1 Samuel 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರ್ಚಕರು ಮತ್ತು ಮಾಂತ್ರಿಕರು ಹೇಳಿದಂತೆಯೇ ಫಿಲಿಷ್ಟಿಯರು ಮಾಡಿದರು. ಫಿಲಿಷ್ಟಿಯರು ಆಗ ತಾನೇ ಕರುಹಾಕಿದ ಎರಡು ಹಸುಗಳನ್ನು ತಂದು, ಅವುಗಳನ್ನು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯ ದೊಡ್ಡಿಯಲ್ಲಿ ಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.
Kannada BSI Bible 2016
ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಪ್ರಕಾರ ಫಿಲಿಷ್ಟಿಯರು ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿ
Kannada Bible (KNCL) BSI 2016
ಫಿಲಿಷ್ಟಿಯರು ಅದೇ ಪ್ರಕಾರ ಮಾಡಿದರು; ಹಾಲುಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯಲ್ಲೇ ಕಟ್ಟಿಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆ ಪ್ರಕಾರವೇ ಎರಡು ಹಾಲು ಕರೆಯುವ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು